Luke 1:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜಕರೀಯನು ದೇವದೂತನಿಗೆ, “ನೀನು ಹೇಳುತ್ತಿರುವುದು ಸತ್ಯವೆಂಬುದಕ್ಕೆ ಆಧಾರವೇನು? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಸಹ ಮುಪ್ಪಿನವಳಾಗಿದ್ದಾಳೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಕರೀಯನು ಆ ದೂತನಿಗೆ, “ಈ ಮಾತು ನೆರವೇರುವುದೆಂದು ನಾನು ತಿಳಿದುಕೊಳ್ಳುವುದಾದರೂ ಹೇಗೆ? ನಾನು ಮುದುಕನು; ನನ್ನ ಹೆಂಡತಿಗೂ ಮುಪ್ಪಿನ ವಯಸ್ಸು” ಎಂದು ಹೇಳಿದನು.
Kannada BSI Bible 2016
ಆಗ ಜಕರೀಯನು ಆ ದೂತನಿಗೆ--ಇದನ್ನು ನಾನು ಯಾವದರಿಂದ ತಿಳು ಕೊಳ್ಳಲಿ? ಯಾಕಂದರೆ ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯಗತಿಸಿದವಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಕರೀಯನು ಆ ದೂತನಿಗೆ - ಇದನ್ನು ನಾನು ಯಾತರಿಂದ ತಿಳುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ದಿನಹೋದವಳು ಎಂದು ಹೇಳಿದ್ದಕ್ಕೆ
Kannada Bible (KNCL) BSI 2016
ಅದಕ್ಕೆ ಜಕರೀಯನು, “ಈ ಮಾತು ನಿಜವಾಗುವುದೆಂದು ನಾನು ತಿಳಿಯುವುದಾದರೂ ಹೇಗೆ? ನಾನೋ ಮುದುಕ; ನನ್ನ ಪತ್ನಿಗೂ ಮುಪ್ಪು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಕರೀಯನು ಆ ದೇವದೂತನಿಗೆ, “ಇದನ್ನು ನಾನು ಯಾವುದರಿಂದ ತಿಳಿದುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯ ಮೀರಿದವಳು,” ಎಂದನು.