Luke 1:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.
Kannada BSI Bible 2016
ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೂತನು - ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನ ಕೂಡ ಮಾತಾಡಿ ಈ ಶುಭವರ್ತಮಾನವನ್ನು ನಿನಗೆ ತಿಳಿಸುವದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.
Kannada Bible (KNCL) BSI 2016
ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಆ ದೂತನು ಉತ್ತರವಾಗಿ, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು. ನಿನ್ನ ಸಂಗಡ ಮಾತನಾಡುವುದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾರೆ.