Luke 1:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.
Kannada BSI Bible 2016
ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವದು; ಆದರೆ ನೀನು ಅದನ್ನು ನಂಬದೆಹೋದದ್ದರಿಂದ ಅದೆಲ್ಲಾ ಸಂಭವಿಸುವ ದಿನದವರೆಗೂ ಮಾತನಾಡಲಾರದೆ ಮೂಕನಾಗಿರುವಿ ಎಂದು ಅವನಿಗೆ ಉತ್ತರಕೊಟ್ಟನು.
Kannada Bible (KNCL) BSI 2016
ನಾನು ತಿಳಿಸಿದ ಸಂದೇಶವು ಸಕಾಲದಲ್ಲಿ ನೆರವೇರುವುದು. ಆದರೆ ನೀನು ಅದನ್ನು ನಂಬದೆಹೋದ ಕಾರಣ ಅದೆಲ್ಲಾ ಈಡೇರುವ ತನಕ ಮಾತನಾಡಲಾಗದೆ ಮೂಕನಾಗಿರುವೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದಕಾರಣ, ಈ ಸಂಗತಿಗಳು ಈಡೇರುವ ದಿನದವರೆಗೆ ನೀನು ಮಾತನಾಡಲಾರದೆ ಮೂಕನಾಗಿರುವಿ,” ಎಂದನು.