Luke 1:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಜಕರೀಯನಿಗಾಗಿ ಎದುರುನೋಡುತ್ತಾ ದೇವಾಲಯದೊಳಗೆ ಅವನು ಇಷ್ಟುಹೊತ್ತು ಇರಲು ಕಾರಣವೇನಿರಬಹುದೆಂದು ಆಶ್ಚರ್ಯಚಕಿತರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇತ್ತ ಜನರು ಜಕರೀಯನಿಗಾಗಿ ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
Kannada BSI Bible 2016
ಆಗ ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದಲ್ಲಿ ಬಹಳ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಟರೊಳಗೆ ಜನರು ಜಕರೀಯನನ್ನು ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.
Kannada Bible (KNCL) BSI 2016
ಇತ್ತ ಭಕ್ತಜನರು ಜಕರೀಯನಿಗಾಗಿ ಎದುರು ನೋಡುತ್ತಾ ದೇವಾಲಯದಲ್ಲಿ ಅವನು ಇಷ್ಟು ತಡಮಾಡಲು ಕಾರಣವೇನಿರಬಹುದೆಂದು ಆಶ್ಚರ್ಯಪಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ, ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.