Luke 1:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಜಕರೀಯನು ಹೊರಗೆ ಬಂದಾಗ, ಅವನಿಗೆ ಅವರೊಡನೆ ಮಾತಾಡಲಾಗಲಿಲ್ಲ. ಆದ್ದರಿಂದ ಅವನಿಗೆ ದೇವಾಲಯದಲ್ಲಿ ದರ್ಶನವಾಗಿರಬೇಕೆಂದು ಅವರು ತಿಳಿದುಕೊಂಡರು. ಅಂದಿನಿಂದ ಅವನು ಮಾತಾಡಲಾಗದೆ ಕೇವಲ ಸನ್ನೆಗಳ ಮೂಲಕ ತಿಳಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತನಾಡಲಾರದೆ ಇರಲು ಅವರು, ಇವನಿಗೆ ದೇವಾಲಯದಲ್ಲಿ ಏನೋ ದಿವ್ಯ ದರ್ಶನವಾಗಿರಬೇಕು ಎಂದು ತಿಳಿದುಕೊಂಡರು. ಜಕರೀಯನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.
Kannada BSI Bible 2016
ಅವನು ಹೊರಗೆ ಬಂದಾಗ ಅವರೊಂದಿಗೆ ಮಾತನಾಡಲಾರದೆ ಇದ್ದನು; ಅದಕ್ಕ ವರು ಅವನು ದೇವಾಲಯದಲ್ಲಿ ಒಂದು ದರ್ಶನವನ್ನು ಕಂಡನೆಂದು ಗ್ರಹಿಸಿದರು; ಯಾಕಂದರೆ ಅವನು ಅವರಿಗೆ ಸನ್ನೆ ಮಾಡುತ್ತಾ ಮಾತಿಲ್ಲದವನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತಾಡಲಾರದೆ ಇರಲು ಅವರು - ಇವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನವಾಗಿರಬೇಕು ಎಂದು ತಿಳುಕೊಂಡರು. ಅವನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.
Kannada Bible (KNCL) BSI 2016
ಅಷ್ಟರಲ್ಲಿ ಜಕರೀಯನು ಹೊರಗೆ ಬಂದು ಮಾತನಾಡಲೆತ್ನಿಸಿದರೂ ಅವನ ಬಾಯಿಂದ ಮಾತೇ ಹೊರಡಲಿಲ್ಲ. ಬರೀ ಕೈಸನ್ನೆಮಾಡುತ್ತಿದ್ದ ಅವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನ ಆಗಿರಬೇಕೆಂದು ಜನರು ಅರಿತುಕೊಂಡರು. ಅಂದಿನಿಂದ ಅವನು ಮೂಕನಾಗಿಯೇ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಕರೀಯನು ಹೊರಗೆ ಬಂದಾಗ, ಅವರೊಂದಿಗೆ ಏನೂ ಮಾತನಾಡಲಾಗಲಿಲ್ಲ. ಅವನು ಅವರಿಗೆ ಸನ್ನೆಮಾಡುತ್ತಾ ಮೂಕನಾಗಿಯೇ ಇದ್ದುದರಿಂದ, ಅವರು ದೇವಾಲಯದಲ್ಲಿ ಅವನಿಗೆ ಏನೋ ದರ್ಶನವಾಗಿರಬೇಕೆಂದು ಗ್ರಹಿಸಿದರು.