Luke 1:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಂದು ಸಂಗತಿಯನ್ನು ಪ್ರಾರಂಭದಿಂದ ನಾನೇ ಶ್ರದ್ಧೆವಹಿಸಿ ಅಧ್ಯಯನ ಮಾಡಿರುವುದರಿಂದ ಅವೆಲ್ಲವನ್ನೂ ನಿನಗೆ ಕ್ರಮಬದ್ಧವಾಗಿ ತಿಳಿಸಲು ಪುಸ್ತಕ ರೂಪದಲ್ಲಿ ಬರೆದಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಒಳ್ಳೆಯದೆಂದು ನನಗೂ ತೋಚಿತು.
Kannada BSI Bible 2016
ಅತ್ಯುತ್ತಮನಾದ ಥೆಯೊಫಿಲನೇ, ಮೊದಲಿ ನಿಂದಲೂ ಎಲ್ಲವುಗಳನ್ನು ಪೂರ್ಣವಾಗಿ ತಿಳಿದುಕೊಂಡಿ ರುವ ನಾನು ಸಹ ಅವುಗಳನ್ನು ಕ್ರಮವಾಗಿ ನಿನಗೆ ಬರೆಯುವದು ಒಳ್ಳೇದೆಂದು ನನಗೆ ತೋಚಿತು;
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬುಡದಿಂದ ಎಲ್ಲವನ್ನೂ ಚೆನ್ನಾಗಿ ವಿಚಾರಿಸಿದವನಾದಕಾರಣ ಅವುಗಳನ್ನು ನಿನಗೆ ಕ್ರಮವಾಗಿ ಬರೆಯುವದು ಒಳ್ಳೇದೆಂದು ನನಗೂ ತೋಚಿತು.
Kannada Bible (KNCL) BSI 2016
ನಾನು ಆಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಉಚಿತವೆಂದು ನನಗೂ ತೋರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು ಸಹ ಮೊದಲಿನಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೋಧಿಸಿ, ಅವುಗಳನ್ನು ಕ್ರಮವಾಗಿ ನಿಮಗೆ ಬರೆಯುವುದು ಒಳ್ಳೆಯದೆಂದು ನನಗೆ ತೋಚಿತು.