Luke 1:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರಿಯಳು ದೇವದೂತನಿಗೆ, “ಇದು ಹೇಗೆ ಸಂಭವಿಸುವುದು? ನಾನು ಮದುವೆಯಾಗಿಲ್ಲವಲ್ಲಾ!” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು.
Kannada BSI Bible 2016
ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರಿಯಳು ಆ ದೂತನನ್ನು - ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಎಂದು ಕೇಳಿದ್ದಕ್ಕೆ ದೂತನು -
Kannada Bible (KNCL) BSI 2016
ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರಿಯಳು ಆ ದೇವದೂತನಿಗೆ, “ಇದು ಹೇಗಾಗುವುದು, ನಾನು ಕನ್ಯೆ?” ಎಂದಳು.