Luke 1:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ, ನಿನ್ನ ಬಂಧುವಾದ ಎಲಿಜಬೇತಳು ಗರ್ಭಿಣಿಯಾಗಿದ್ದಾಳೆ. ಆಕೆಯು ಬಹಳ ಮುಪ್ಪಿನವಳಾಗಿದ್ದರೂ ಆಕೆಗೊಬ್ಬ ಮಗ ಹುಟ್ಟುವನು. ಜನರಿಂದ ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡು ಮಗುವಿದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಈಗ ಆರನೆಯ ತಿಂಗಳು.
Kannada BSI Bible 2016
ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನಿನ್ನ ಬಂಧುವಾದ ಎಲಿಸಬೇತಳಿದ್ದಾಳಲ್ಲಾ, ಆಕೆ ಸಹ ಮುಪ್ಪಿನವಳಾದರೂ ಗರ್ಭಿಣಿಯಾಗಿದ್ದಾಳೆ; ಆಕೆಯ ಗರ್ಭದಲ್ಲಿ ಗಂಡುಮಗುವದೆ; ಬಂಜೆಯೆನಿಸಿಕೊಂಡಿದ್ದ ಆಕೆಗೆ ಇದೇ ಆರನೆಯ ತಿಂಗಳು.
Kannada Bible (KNCL) BSI 2016
ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು; ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆ; ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಬಂಧು ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಒಬ್ಬ ಮಗನನ್ನು ಹೆರಲಿದ್ದಾಳೆ. ಬಂಜೆಯಾಗಿದ್ದ ಆಕೆಗೆ ಇದು ಆರನೆಯ ತಿಂಗಳು.