Luke 1:48 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು,
Kannada BSI Bible 2016
ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಲ್ಲಾ ನನ್ನನ್ನು ಧನ್ಯಳೆಂದು ಹೊಗಳುವರು.
Kannada Bible (KNCL) BSI 2016
ತನ್ನ ದಾಸಿಯ ದೀನತೆಯನು ನೆನಪಿಗೆ ತಂದುಕೊಂಡನಾತ I ಧನ್ಯಳೆಂದು ಹೊಗಳುವರೆನ್ನನು ಇಂದಿನಿಂದ ಸರ್ವಜನಾಂಗ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾರೆ. ಇಂದಿನಿಂದ ತಲತಲಾಂತರದವರೆಲ್ಲರೂ ನನ್ನನ್ನು ಧನ್ಯಳೆಂದು ಕರೆಯುವರು,