Luke 1:58 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.
Kannada BSI Bible 2016
ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ದಯವನ್ನು ವಿಶೇಷವಾಗಿ ತೋರಿಸಿದ್ದಾನೆಂಬದನ್ನು ಕೇಳಿ ಆಕೆಯ ಕೂಡ ಸಂತೋಷಪಟ್ಟರು.
Kannada Bible (KNCL) BSI 2016
ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತದೇವರು ತಮ್ಮ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಯವರೂ ಬಂಧುಗಳೂ ಕೇಳಿ, ಆಕೆಯ ಕೂಡ ಸಂತೋಷಪಟ್ಟರು.