Luke 1:59 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಗುವಿಗೆ ಎಂಟು ದಿನವಾದಾಗ ಅವರು ಸುನ್ನತಿ ಮಾಡಿಸುವುದಕ್ಕಾಗಿ ಬಂದರು. ಅವರು ಆ ಮಗುವಿಗೆ “ಜಕರೀಯ” ಎಂಬ ಹೆಸರು ಇಡಬೇಕೆಂದಿದ್ದರು. ಏಕೆಂದರೆ ಅದು ಮಗುವಿನ ತಂದೆಯ ಹೆಸರಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು.
Kannada BSI Bible 2016
ತರುವಾಯ ಅವರು ಎಂಟನೇ ದಿನದಲ್ಲಿ ಆ ಮಗುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಬಂದು ಅವನ ತಂದೆಯ ಹೆಸರಿನಂತೆ ಅವನನ್ನು ಜಕರೀಯನೆಂದು ಕರೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು.
Kannada Bible (KNCL) BSI 2016
ಎಂಟನೆಯ ದಿನ ಮಗುವಿನ ಸುನ್ನತಿಗಾಗಿ ಅವರು ಬಂದು ಅದಕ್ಕೆ, ತಂದೆಯ ಹೆಸರನ್ನು ಅನುಸರಿಸಿ, ಜಕರೀಯನೆಂದು ನಾಮಕರಣ ಮಾಡುವುದರಲ್ಲಿ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಎಂಟನೆಯ ದಿನ ಆ ಮಗುವಿಗೆ ಸುನ್ನತಿ ಮಾಡಿಸುವುದಕ್ಕಾಗಿ ಬಂದು, ಅವನ ತಂದೆಯ ಹೆಸರಿನಂತೆ ಮಗನನ್ನು ಜಕರೀಯನೆಂದು ನಾಮಕರಣ ಮಾಡಲಿದ್ದರು.