Luke 1:63 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಜಕರೀಯನು ಸನ್ನೆಮಾಡಿ, ಒಂದು ಹಲಗೆಯನ್ನು ತರಿಸಿಕೊಂಡು, “ಈತನ ಹೆಸರು ಯೋಹಾನ” ಎಂದು ಬರೆದನು. ಜನರೆಲ್ಲರಿಗೂ ಆಶ್ಚರ್ಯವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಒಂದು ಹಲಗೆಯನ್ನು ತರಿಸಿಕೊಂಡು, “ಆತನ ಹೆಸರು ಯೋಹಾನನು” ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು.
Kannada BSI Bible 2016
ಆಗ ಅವನು ಒಂದು ಬರೆಯುವ ಹಲಗೆಯನ್ನು ಕೇಳಿ ಅವನ ಹೆಸರು ಯೋಹಾನನು ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಒಂದು ಹಲಿಗೆಯನ್ನು ತರಿಸಿಕೊಂಡು - ಯೋಹಾನನೆಂತಲೇ ಅದರ ಹೆಸರು ಎಂದು ಬರೆದನು. ಅದಕ್ಕೆ ಎಲ್ಲರೂ ಆಶ್ಚರ್ಯಪಟ್ಟರು.
Kannada Bible (KNCL) BSI 2016
ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, ‘ಇವನ ಹೆಸರು ಯೊವಾನ್ನ’ ಎಂದು ಬರೆದನು. ಎಲ್ಲರೂ ಬೆರಗಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜಕರೀಯನು ಒಂದು ಬರೆಯುವ ಹಲಗೆಯನ್ನು ಕೇಳಿ, “ಶಿಶುವಿನ ಹೆಸರು ಯೋಹಾನ,” ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.