Luke 1:66 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸಂಗತಿಗಳನ್ನು ಕೇಳಿದ ಜನರೆಲ್ಲರು ಆಶ್ಚರ್ಯಪಟ್ಟು “ಈ ಮಗು (ಯೋಹಾನ) ಬೆಳೆದು ದೊಡ್ಡವನಾದ ಮೇಲೆ ಎಂಥ ವ್ಯಕ್ತಿಯಾಗುವನೋ?” ಎಂದು ಯೋಚಿಸತೊಡಗಿದರು. ಏಕೆಂದರೆ ಪ್ರಭುವು ಈ ಮಗುವಿನ ಸಂಗಡವಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು.
Kannada BSI Bible 2016
ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೇಳಿದವರೆಲ್ಲರೂ - ಆಹಾ, ಈ ಕೂಸು ಎಂಥವನಾಗುವನೋ ಎಂದು ಈ ಸಂಗತಿಗಳನ್ನು ಮನಸ್ಸಿನಲ್ಲಿಟ್ಟುಕೊಂಡರು ಮತ್ತು ಕರ್ತನ ಹಸ್ತವು ಅದರ ಮೇಲೆ ಇತ್ತು.
Kannada Bible (KNCL) BSI 2016
ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ‘ಈ ಮಗು ಮುಂದೆ ಎಂಥವನಾಗುವನೋ!’ ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಈ ಮಗುವಿನ ಮೇಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೇಳಿದವರೆಲ್ಲರೂ ವಿಸ್ಮಯಗೊಂಡು, “ಈ ಮಗುವು ಎಂಥವನಾಗುವನೋ?” ಎಂದು ತಮ್ಮ ಮನಸ್ಸಿನಲ್ಲಿ ಪ್ರಶ್ನಿಸಿಕೊಂಡರು. ಕರ್ತದೇವರ ಹಸ್ತವು ಈ ಮಗುವಿನ ಮೇಲೆ ಇತ್ತು.