Luke 10:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನಮ್ಮ ಕಾಲುಗಳಿಗೆ ಹತ್ತಿದ ನಿಮ್ಮ ಊರಿನ ಧೂಳನ್ನು ನಿಮಗೆ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ದೇವರ ರಾಜ್ಯ ಸಮೀಪಿಸುತ್ತಿದೆ ಎಂಬುದು ನಿಮಗೆ ತಿಳಿದಿರಲಿ’ ಎಂದು ಹೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.
Kannada BSI Bible 2016
ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಊರಿಂದ ನಮ್ಮ ಕಾಲುಗಳಿಗೆ ಹತ್ತಿದ ಧೂಳನ್ನೂ ಒರಸಿಬಿಡುತ್ತೇವೆ; ಅದು ನಿಮಗೇ ಇರಲಿ; ಆದಾಗ್ಯೂ ದೇವರ ರಾಜ್ಯವು ಸಮೀಪಕ್ಕೆ ಬಂದದೆ ಎಂದು ನಿಮಗೆ ತಿಳಿದಿರಲಿ ಎಂಬದಾಗಿ ಹೇಳಿರಿ.
Kannada Bible (KNCL) BSI 2016
‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮಗೆ ವಿರುದ್ಧವಾಗಿ ಒದರಿಬಿಡುತ್ತೇವೆ. ಆದರೂ ದೇವರ ಸಾಮ್ರಾಜ್ಯ ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ,’ ಎಂದು ತಿಳಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಮ್ಮ ಪಾದಗಳಿಗೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ. ಆದರೂ ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ,’ ಎಂದು ಹೇಳಿರಿ.