Luke 10:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.
Kannada BSI Bible 2016
ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ ಕೂತುಕೊಂಡು ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.
Kannada Bible (KNCL) BSI 2016
“ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಅದ್ಭುತಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.