Luke 10:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಪ್ಪತ್ತೆರಡು ಮಂದಿ ಶಿಷ್ಯರು ತಮ್ಮ ಪ್ರವಾಸದಿಂದ ಹಿಂತಿರುಗಿ ಬಂದಾಗ ಬಹಳ ಸಂತೋಷವಾಗಿದ್ದರು. ಅವರು ಯೇಸುವಿಗೆ, “ಪ್ರಭುವೇ, ನಾವು ನಿನ್ನ ಹೆಸರನ್ನು ಹೇಳಿದಾಗ ದೆವ್ವಗಳು ಸಹ ನಮಗೆ ವಿಧೇಯವಾದವು!” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.
Kannada BSI Bible 2016
ತರುವಾಯ ಆ ಎಪ್ಪತ್ತು ಮಂದಿ ಸಂತೋಷದಿಂದ ಹಿಂತಿರುಗಿ--ಕರ್ತನೇ, ನಿನ್ನ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು - ಸ್ವಾಮೀ, ದೆವ್ವಗಳು ಕೂಡಾ ನಿನ್ನ ಹೆಸರನ್ನು ಕೇಳಿ ನಮಗೆ ಅಧೀನವಾಗುತ್ತವೆ ಅಂದರು.
Kannada Bible (KNCL) BSI 2016
ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಎಪ್ಪತ್ತೆರಡು ಮಂದಿ ಸಂತೋಷದಿಂದ ಹಿಂತಿರುಗಿ, “ಕರ್ತದೇವರೇ, ನಿಮ್ಮ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು,” ಎಂದರು.