Luke 10:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೇಳಿರಿ! ಹಾವುಗಳ ಮತ್ತು ಚೇಳುಗಳ ಮೇಲೆ ನಡೆಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ವೈರಿಗಿರುವ ಅಧಿಕಾರಕ್ಕಿಂತಲೂ (ಸೈತಾನ) ಹೆಚ್ಚಿನ ಅಧಿಕಾರವನ್ನು ನಿಮಗೆ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
Kannada BSI Bible 2016
ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವದೂ ನಿಮಗೆ ಕೇಡುಮಾಡುವದೇ ಇಲ್ಲ.
Kannada Bible (KNCL) BSI 2016
ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವುದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವುದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡಲಾರದು.