Luke 10:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಕೆಲವರೇ. ದೇವರೇ ಬೆಳೆಗೆ (ಜನರ) ಯಜಮಾನನು. ಬೆಳೆಯನ್ನು ಒಟ್ಟುಗೂಡಿಸುವುದಕ್ಕಾಗಿ ಹೆಚ್ಚು ಕೆಲಸಗಾರರನ್ನು ಕಳುಹಿಸಿಕೊಡುವಂತೆ ಯಜಮಾನನನ್ನು ಬೇಡಿಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.
Kannada BSI Bible 2016
ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾನು ಹೋಗಬೇಕೆಂದಿದ್ದ ಪ್ರತಿಯೊಂದೂರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು. ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - ಬೆಳೆಯು ಬಹಳ, ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನನ್ನು - ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ಬೇಡಿಕೊಳ್ಳಿರಿ.
Kannada Bible (KNCL) BSI 2016
ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ಬೆಳೆಯೋ ಬಹಳವಾಗಿದೆ, ಕೆಲಸದವರೋ ಕೆಲವರು. ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ.