Luke 10:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅನೇಕ ಪ್ರವಾದಿಗಳೂ ಅರಸರೂ ಈಗ ನೀವು ನೋಡುತ್ತಿರುವ ಈ ಸಂಗತಿಗಳನ್ನು ನೋಡಬೇಕೆಂದು ಮತ್ತು ಈಗ ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.
Kannada BSI Bible 2016
ಯಾಕಂದರೆ ಅನೇಕ ಪ್ರವಾದಿಗಳೂ ಅರಸರೂ ನೀವು ನೋಡು ವಂಥವುಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳ ಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಿಲ್ಲ ಎಂಬದಾಗಿ ನಿಮಗೆ ಹೇಳುತ್ತೇನೆ ಅಂದನು.
Kannada Bible (KNCL) BSI 2016
ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕಾಣಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅನೇಕ ಪ್ರವಾದಿಗಳು ಮತ್ತು ಅರಸರು ನೀವು ಕಾಣುವಂಥವುಗಳನ್ನು ಕಾಣಬೇಕೆಂದು ಅಪೇಕ್ಷಿಸಿದರೂ ಕಾಣಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.