Luke 10:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಅವನು, “‘ನೀನು ನಿನ್ನ ಪ್ರಭುವಾದ ದೇವರನ್ನು ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ಮತ್ತು ಪೂರ್ಣಮನಸ್ಸಿನಿಂದ ಪ್ರೀತಿಸಬೇಕು’ ಎಂದು ಬರೆದಿದೆ” ಎಂಬುದಾಗಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
Kannada BSI Bible 2016
ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅವನು - ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಬುದ್ಧಿಯಿಂದಲೂ ಪ್ರೀತಿಸಬೇಕು. ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂದು ಬರೆದದೆ ಅಂದನು.
Kannada Bible (KNCL) BSI 2016
ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಆತ್ಮದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವನು ಉತ್ತರವಾಗಿ, “ ‘ನೀನು ನಿನ್ನ ದೇವರಾದ ಕರ್ತದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು,’ ಮತ್ತು ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು,’ ” ಎಂದನು.