Luke 10:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬ ಮನುಷ್ಯನು ಜೆರುಸಲೇಮಿನಿಂದ ಇಳಿದು ಜೆರಿಕೊವಿನ ಮಾರ್ಗವಾಗಿ ಹೋಗುತ್ತಿದ್ದನು. ಕೆಲವು ದರೋಡೆಗಾರರು ಅವನನ್ನು ಸುತ್ತುಗಟ್ಟಿದರು. ಅವರು ಅವನ ಬಟ್ಟೆಯನ್ನು ಹರಿದುಹಾಕಿ ಅವನನ್ನು ಹೊಡೆದರು. ಅವನು ಮೇಲೇಳಲಾರದೆ ನೆಲದಮೇಲೆ ಬಿದ್ದುಕೊಂಡನು. ದರೋಡೆಗಾರರು ಅವನನ್ನು ನೆಲದ ಮೇಲೆಯೇ ಬಿಟ್ಟುಹೋದರು. ಅವನು ಸಾಯುವ ಸ್ಥಿತಿಯಲ್ಲಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.
Kannada BSI Bible 2016
ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ - ಒಬ್ಬಾನೊಬ್ಬ ಮನುಷ್ಯನು ಯೆರೂಸಲೇವಿುನಿಂದ ಘಟ್ಟಾ ಇಳಿದು ಯೆರಿಕೋವಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು ಗಾಯವಾಗುವಷ್ಟು ಹೊಡೆದು ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.
Kannada Bible (KNCL) BSI 2016
ಆಗ ಯೇಸು ಅವನಿಗೆ ಹೀಗೆಂದು ವಿವರಿಸಿದರು: “ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ ಅಲ್ಲೇ ಬಿಟ್ಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು: “ಒಬ್ಬ ಮನುಷ್ಯನು ಯೆರೂಸಲೇಮಿನಿಂದ ಯೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನ ವಸ್ತ್ರಗಳನ್ನು ಕಿತ್ತುಕೊಂಡು, ಅವನನ್ನು ಗಾಯಮಾಡಿ, ಅರೆಜೀವ ಮಾಡಿಬಿಟ್ಟು ಹೊರಟು ಹೋದರು.