Luke 10:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅದೇ ಸಮಯದಲ್ಲಿ ಯೆಹೂದ್ಯ ಯಾಜಕನು ಆ ದಾರಿಯಲ್ಲಿ ಹೋಗುತ್ತಿದ್ದನು. ಯಾಜಕನು ಆ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯಮಾಡದೆ, ತನ್ನ ಪ್ರಯಾಣವನ್ನು ಮುಂದುವರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.
Kannada BSI Bible 2016
ಆಗ ಅನಿರೀಕ್ಷಿತವಾಗಿ ಒಬ್ಬಾನೊಬ್ಬ ಯಾಜಕನು ಆ ಮಾರ್ಗವಾಗಿ ಬಂದು ಅವನನ್ನು ನೋಡಿ ಓರೆ ಯಾಗಿ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಹೇಗೋ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ವಾರೆಯಾಗಿ ಹೋದನು.
Kannada Bible (KNCL) BSI 2016
ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದುಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಒಬ್ಬ ಯಾಜಕನು ಅದೇ ಮಾರ್ಗವಾಗಿ ಬಂದು ಅವನನ್ನು ಕಂಡು, ದಾರಿಯ ಬೇರೆ ಕಡೆಹೋದನು.