Luke 10:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮಾರ್ಯದವನು ಅವನ ಬಳಿಗೆ ಹೋಗಿ ಅವನ ಗಾಯಗಳಿಗೆ ಆಲಿವ್ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಬಟ್ಟೆಯಿಂದ ಕಟ್ಟಿದನು. ಸಮಾರ್ಯದವನು ಒಂದು ಕತ್ತೆಯ ಮೇಲೆ ಪ್ರಯಾಣ ಮಾಡುತ್ತಾ ಅಲ್ಲಿಗೆ ಬಂದಿದ್ದನು. ಗಾಯಗೊಂಡಿದ್ದ ಆ ಮನುಷ್ಯನನ್ನು ಅವನು ತನ್ನ ಕತ್ತೆಯ ಮೇಲೆ ಕುಳ್ಳಿರಿಸಿ, ಛತ್ರಕ್ಕೆ ಕರೆದುಕೊಂಡು ಹೋಗಿ, ಅವನನ್ನು ಆರೈಕೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.
Kannada BSI Bible 2016
ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸ ವನ್ನೂ ಹೊಯ್ದು ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ಪಶುವಿನ ಮೇಲೆ ಕೂಡ್ರಿಸಿ ವಸತಿ ಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕನಿಕರಿಸಿ ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಲ್ಲಿ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಕಟ್ಟಿ ತನ್ನ ಸ್ವಂತ ವಾಹನದ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.
Kannada Bible (KNCL) BSI 2016
ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು, ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ವಾಹಕಪಶುವಿನ ಮೇಲೆ ಕುಳ್ಳಿರಿಸಿ, ವಸತಿಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.