Luke 10:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ, ಸಮಾರ್ಯದವನು ಎರಡು ಬೆಳ್ಳಿ ನಾಣ್ಯಗಳನ್ನು ಆ ಛತ್ರದವನಿಗೆ ಕೊಟ್ಟು, ‘ಗಾಯಗೊಂಡ ಇವನನ್ನು ಆರೈಕೆ ಮಾಡು. ಇದಕ್ಕಿಂತ ಹೆಚ್ಚಾಗಿ ಖರ್ಚಾದರೆ ನಾನು ಮತ್ತೆ ಬಂದಾಗ ನಿನಗೆ ಕೊಡುತ್ತೇನೆ’ ಎಂದು ಹೇಳಿದನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಅವನು ಎರಡು ದಿನಾರಿಗಳನ್ನು ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.
Kannada BSI Bible 2016
ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ನಾಣ್ಯ ಗಳನ್ನು ತೆಗೆದು ವಸತಿಗೃಹದ ಯಜಮಾನನಿಗೆ ಕೊಟ್ಟು ಅವನಿಗೆ--ಇವನನ್ನು ಆರೈಕೆ ಮಾಡು, ನೀನು ಏನಾ ದರೂ ಹೆಚ್ಚು ವೆಚ್ಚ ಮಾಡಿದರೆ ನಾನು ತಿರಿಗಿ ಬಂದಾಗ ಕೊಟ್ಟು ತೀರಿಸುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ಅವನು ಎರಡು ಹಣಗಳನ್ನು ತೆಗೆದು ಛತ್ರದವನಿಗೆ ಕೊಟ್ಟು - ಇವನನ್ನು ಆರೈಕೆಮಾಡು; ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು ಅಂದನು.
Kannada Bible (KNCL) BSI 2016
ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ‘ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ,’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ಬೆಳ್ಳಿ ನಾಣ್ಯವನ್ನು ತೆಗೆದು ಛತ್ರದ ಯಜಮಾನನಿಗೆ ಕೊಟ್ಟು ಅವನಿಗೆ, ‘ಇವನನ್ನು ಆರೈಕೆ ಮಾಡು, ನೀನು ಏನಾದರೂ ಹೆಚ್ಚು ವೆಚ್ಚಮಾಡಿದರೆ, ನಾನು ತಿರುಗಿ ಬರುವಾಗ ಕೊಟ್ಟು ತೀರಿಸುತ್ತೇನೆ,’ ಎಂದನು.