Luke 10:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಮತ್ತು ಆತನ ಶಿಷ್ಯರು ಪ್ರಯಾಣ ಮಾಡುತ್ತಾ ಒಂದು ಊರಿಗೆ ಬಂದರು. ಮಾರ್ಥಳೆಂಬ ಸ್ತ್ರೀ ಯೇಸುವನ್ನು ತನ್ನ ಮನೆಗೆ ಆಮಂತ್ರಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.
Kannada BSI Bible 2016
ಇದಾದ ಮೇಲೆ ಅವರು ಹೋಗುತ್ತಿದ್ದಾಗ ಆತನು ಒಂದಾನೊಂದು ಹಳ್ಳಿಯನ್ನು ಪ್ರವೇಶಿಸಿದನು; ಆಗ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯೊಳಗೆ ಅಂಗೀಕರಿಸಿಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸಂಚಾರಮಾಡುತ್ತಿರುವಾಗ ಆತನು ಒಂದಾನೊಂದು ಹಳ್ಳಿಗೆ ಬಂದನು; ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಇಳಿಸಿಕೊಂಡಳು.
Kannada Bible (KNCL) BSI 2016
ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮತ್ತು ಅವರ ಶಿಷ್ಯರು ಸಂಚಾರಮಾಡುತ್ತಾ, ಒಂದು ಹಳ್ಳಿಗೆ ಬಂದರು, ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಅವರನ್ನು ತನ್ನ ಮನೆಯೊಳಗೆ ಸ್ವೀಕರಿಸಿಕೊಂಡಳು.