Luke 10:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನೆಯಲ್ಲಿ ಬಹಳ ಕೆಲಸವಿದ್ದುದರಿಂದ ಮಾರ್ಥಳು ಕೋಪಗೊಂಡು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ತಂಗಿಯು ಮನೆಯ ಕೆಲಸವನ್ನೆಲ್ಲಾ ನನಗೇ ಬಿಟ್ಟುಬಂದಿದ್ದಾಳೆ. ಇದರ ಬಗ್ಗೆ ನಿನಗೆ ಚಿಂತೆಯಿಲ್ಲವೋ? ನನಗೆ ಸಹಾಯ ಮಾಡಲು ಆಕೆಗೆ ಹೇಳು?” ಎಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.
Kannada BSI Bible 2016
ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮಾರ್ಥಳು ಬಹಳ ಸೇವೆಯ ವಿಷಯವಾಗಿ ಬೇಸತ್ತು ಆತನ ಬಳಿಗೆ ಬಂದು - ಸ್ವಾಮೀ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು ಅಂದಳು.
Kannada Bible (KNCL) BSI 2016
ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, “ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಅವರ ಬಳಿಗೆ ಬಂದು, “ಕರ್ತದೇವರೇ, ಕೆಲಸ ಮಾಡುವುದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವುದು ನಿಮಗೆ ಚಿಂತೆಯಿಲ್ಲವೋ? ನನಗೆ ಸಹಾಯಮಾಡುವುದಕ್ಕಾಗಿ ಅವಳಿಗೆ ಹೇಳಿರಿ!” ಎಂದಳು.