Luke 10:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮನೆಯಲ್ಲಿ ಇಳಿದುಕೊಂಡು ಅವರು ಕೊಡುವುದನ್ನು ತಿನ್ನಿರಿ, ಕುಡಿಯಿರಿ. ಕೆಲಸಗಾರನು ಸಂಬಳಕ್ಕೆ ಯೋಗ್ಯನಾಗಿದ್ದಾನೆ. ಆದ್ದರಿಂದ ಇಳಿದುಕೊಳ್ಳುವುದಕ್ಕಾಗಿ ಆ ಮನೆಯನ್ನು ಬಿಟ್ಟು ಇನ್ನೊಂದು ಮನೆಗೆ ಹೋಗಬೇಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.
Kannada BSI Bible 2016
ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳುಕೊಳ್ಳಬೇಡಿರಿ.
Kannada Bible (KNCL) BSI 2016
ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನೆಯಿಂದ ಮನೆಗೆ ಹೋಗದೆ, ಅದೇ ಮನೆಯಲ್ಲಿದ್ದು, ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ. ಕೆಲಸದವನು ತನ್ನ ಕೂಲಿಗೆ ಯೋಗ್ಯನು.