Luke 11:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥಿಸುತ್ತಿದ್ದನು. ಯೇಸು ಪ್ರಾರ್ಥನೆ ಮಾಡಿ ಮುಗಿಸಿದಾಗ, ಆತನ ಶಿಷ್ಯರಲ್ಲೊಬ್ಬನು, “ಪ್ರಭುವೇ, ಯೋಹಾನನು ತನ್ನ ಶಿಷ್ಯರಿಗೆ ಪ್ರಾರ್ಥಿಸುವ ವಿಧಾನವನ್ನು ಕಲಿಸಿದಂತೆ, ದಯಮಾಡಿ ನಮಗೂ ಪ್ರಾರ್ಥಿಸುವ ವಿಧಾನವನ್ನು ಹೇಳಿಕೊಡು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.
Kannada BSI Bible 2016
ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ - ಸ್ವಾಮೀ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆಮಾಡುವದನ್ನು ಕಲಿಸು ಎಂದು ಕೇಳಿದನು.
Kannada Bible (KNCL) BSI 2016
ಒಮ್ಮೆ ಯೇಸುಸ್ವಾಮಿ ಒಂದು ಸ್ಥಳದಲ್ಲಿ ಪ್ರಾರ್ಥನೆಮಾಡುತ್ತಾ ಇದ್ದರು. ಅವರ ಪ್ರಾರ್ಥನೆ ಮುಗಿದ ಮೇಲೆ ಶಿಷ್ಯರಲ್ಲಿ ಒಬ್ಬನು. “ಪ್ರಭುವೇ, ಯೊವಾನ್ನನು ತನ್ನ ಶಿಷ್ಯರಿಗೆ ಪ್ರಾರ್ಥನೆ ಮಾಡುವುದನ್ನು ಕಲಿಸಿದ ಹಾಗೆ ನಮಗೂ ಕಲಿಸಿಕೊಡಿ,” ಎಂದನು. ಅದಕ್ಕೆ ಯೇಸು ಇಂತೆಂದರು, “ನೀವು ಹೀಗೆ ಪ್ರಾರ್ಥನೆಮಾಡಬೇಕು: ತಂದೆಯೇ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆಮಾಡಿ ಮುಗಿಸಿದ ಮೇಲೆ, ಅವರ ಶಿಷ್ಯರಲ್ಲಿ ಒಬ್ಬನು ಅವರಿಗೆ, “ಕರ್ತದೇವರೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆಮಾಡುವುದಕ್ಕೆ ಕಲಿಸಿರಿ,” ಎಂದು ಕೇಳಿದನು.