Luke 11:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೌದು, ಎಡಬಿಡದೆ ಬೇಡಿಕೊಳ್ಳುವವನಿಗೆ ದೊರೆಯುವುದು. ಎಡಬಿಡದೆ ಹುಡುಕುವವನು ಕಂಡುಕೊಳ್ಳುವನು. ಒಬ್ಬನು ಎಡಬಿಡದೆ ತಟ್ಟುತ್ತಿದ್ದರೆ, ಅವನಿಗೆ ಬಾಗಿಲು ತೆರೆಯಲ್ಪಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.
Kannada BSI Bible 2016
ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಟ್ಟಿರಿ, ನಿಮಗೆ ತೆರೆಯುವದು. ಯಾಕಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವದು, ತಟ್ಟುವವನಿಗೆ ತೆರೆಯುವದು.
Kannada Bible (KNCL) BSI 2016
ಏಕೆಂದರೆ, ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.