Luke 11:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.
Kannada BSI Bible 2016
ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು.
Kannada Bible (KNCL) BSI 2016
ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.