Luke 11:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಮ್ಮೆ ಯೇಸು ಮೂಕದೆವ್ವದಿಂದ ಪೀಡಿತನಾಗಿದ್ದ ಒಬ್ಬನನ್ನು ಬಿಡಿಸುತ್ತಿದ್ದನು. ಆ ದೆವ್ವವು ಅವನನ್ನು ಬಿಟ್ಟು ಹೊರಗೆ ಬಂದಾಗ ಅವನು ಮಾತಾಡಿದನು. ಇದನ್ನು ಕಂಡ ಜನರು ಬೆರಗಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.
Kannada BSI Bible 2016
ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದಾನೊಂದು ಸಮಯದಲ್ಲಿ ಆತನು ಮೂಕ ದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟುಹೋದ ಮೇಲೆ ಮೂಕನು ಮಾತಾಡಿದನು; ಅದಕ್ಕೆ ಜನರು ಆಶ್ಚರ್ಯಪಟ್ಟರು.
Kannada Bible (KNCL) BSI 2016
ಒಮ್ಮೆ ಯೇಸುಸ್ವಾಮಿ ಒಂದು ಮೂಕ ದೆವ್ವವನ್ನು ಬಿಡಿಸುತ್ತಿದ್ದರು. ಆ ದೆವ್ವ ಬಿಟ್ಟುಹೋದ ಮೇಲೆ ಮೂಕನು ಮಾತನಾಡಿದನು. ಜನರು ಆಶ್ಚರ್ಯಚಕಿತರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಒಂದು ಮೂಕದೆವ್ವವನ್ನು ಹೊರಗೆ ಓಡಿಸುತ್ತಿದ್ದರು. ಆ ದೆವ್ವವು ಹೊರಟುಹೋದ ಮೇಲೆ, ಆ ಮೂಕನು ಮಾತನಾಡಿದನು. ಅದಕ್ಕೆ ಜನರು ಆಶ್ಚರ್ಯಪಟ್ಟರು.