Luke 11:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅವರ ಆಲೋಚನೆಯನ್ನು ತಿಳಿದಿದ್ದ ಯೇಸು ಅವರಿಗೆ, “ಒಡೆದುಹೋದ ಮತ್ತು ತನಗೆ ವಿರುದ್ಧವಾಗಿ ತಾನೇ ಕಾದಾಡುವ ರಾಜ್ಯವು ನಾಶವಾಗುವುದು. ಭೇದಭಾವದಿಂದ ಕೂಡಿರುವ ಕುಟುಂಬವು ಮುರಿದು ಹೋಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು.
Kannada BSI Bible 2016
ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರ ಆಲೋಚನೆಗಳನ್ನು ತಿಳುಕೊಂಡು ಅವರಿಗೆ ಹೇಳಿದ್ದೇನಂದರೆ - ತನ್ನಲ್ಲಿ ಭೇದಹುಟ್ಟಿದ ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ಭೇದಹುಟ್ಟಿದ ಮನೆ ಬೀಳುತ್ತದೆ.
Kannada Bible (KNCL) BSI 2016
ಅವರ ಆಲೋಚನೆಗಳನ್ನು ಅರಿತುಕೊಂಡು ಯೇಸು, “ಅಂತಃಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯ ನಾಶವಾಗುವುದು; ಕುಟುಂಬ ಕುಟುಂಬಗಳು ಕಚ್ಚಾಡಿ ಹಾಳಾಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು: “ತನಗೆ ತಾನೇ ವಿರೋಧವಾಗಿ ವಿಭಾಗಗೊಂಡರೆ ಪ್ರತಿಯೊಂದು ರಾಜ್ಯವು ನಾಶವಾಗುವುದು, ಒಂದು ಮನೆಯು ತನಗೆ ತಾನೇ ವಿರೋಧವಾಗಿ ವಿಭಾಗವಾದರೆ, ಅದು ಬಿದ್ದುಹೋಗುವುದು.