Luke 11:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತೆಯೇ, ಸೈತಾನನು ತನಗೆ ವಿರುದ್ಧವಾಗಿ ತಾನೇ ಕಾದಾಡಿದರೆ ಅವನ ರಾಜ್ಯವು ಮುಂದುವರಿಯಲು ಹೇಗೆ ಸಾಧ್ಯ? ನಾನು ದೆವ್ವಗಳನ್ನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತೇನೆಂದು ನೀವು ಹೇಳುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ,
Kannada BSI Bible 2016
ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಂತೆ ಸೈತಾನನು ತನ್ನಲ್ಲಿ ಭೇದಹುಟ್ಟಿಸಿಕೊಂಡರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತಿ ಎಂದು ನನಗೆ ಹೇಳುತ್ತೀರಲ್ಲಾ.
Kannada Bible (KNCL) BSI 2016
ಅಂತೆಯೇ ಸೈತಾನನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯ ಹೇಗೆ ತಾನೆ ಉಳಿದೀತು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೈತಾನನು ಸಹ ತನಗೆ ತಾನೇ ವಿರೋಧವಾಗಿ ತನ್ನಲ್ಲಿ ವಿಭಾಗವಾದರೆ, ಅವನ ರಾಜ್ಯವು ನಿಲ್ಲುವುದು ಹೇಗೆ? ಏಕೆಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.