Luke 11:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾಗಿದ್ದರೆ, ನಿಮ್ಮ ಜನರು ದೆವ್ವಗಳನ್ನು ಯಾವ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನು ತಪ್ಪಿತಸ್ಥರೆಂದು ಹೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.
Kannada BSI Bible 2016
ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವವರಾಗುವರು.
Kannada Bible (KNCL) BSI 2016
ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.