Luke 11:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅವನಿಗಿಂತಲೂ ಬಲಿಷ್ಠನಾದ ಮತ್ತೊಬ್ಬನು ಬಂದು ಅವನನ್ನು ಸೋಲಿಸಿದರೆ, ಮೊದಲನೆಯ ಬಲಿಷ್ಠನು ತನ್ನ ಮನೆಯನ್ನು ಸುರಕ್ಷಿತವಾಗಿಡುವುದಕ್ಕಾಗಿ ಅವಲಂಬಿಸಿಕೊಂಡಿದ್ದ ಆಯುಧಗಳನ್ನೆಲ್ಲಾ ಆ ಮತ್ತೊಬ್ಬ ಬಲಿಷ್ಠನು ತೆಗೆದುಕೊಂಡು ಹೋಗುವನು. ಬಳಿಕ ಆ ಮತ್ತೊಬ್ಬ ಬಲಿಷ್ಠನು ಆ ಮನುಷ್ಯನ ವಸ್ತುಗಳನ್ನು ತನಗೆ ಇಷ್ಟಬಂದ ಹಾಗೆ ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ.
Kannada BSI Bible 2016
ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಸೋಲಿಸಿದ ಮೇಲೆ ಆ ಮೊದಲಿನವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ತೆಗೆದುಕೊಂಡು ತಾನು ಸುಲಿಗೆಮಾಡಿದ್ದನ್ನು ಹಂಚಿಕೊಡುವನು.
Kannada Bible (KNCL) BSI 2016
ಆದರೆ ಇವನಿಗಿಂತಲೂ ಬಲಿಷ್ಠನು ಎದುರಿಸಿ ಬಂದು ಇವನನ್ನು ಗೆದ್ದಾಗ, ಇವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಯನ್ನು ಹಂಚಿಕೊಡುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನಿಗಿಂತ ಬಲಿಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ, ಅವನು ಭರವಸೆಯಿಟ್ಟಿದ್ದ ಆಯುಧಗಳನ್ನು ಅವನಿಂದ ತೆಗೆದುಕೊಂಡು ತನ್ನ ಸುಲಿಗೆಯನ್ನೆಲ್ಲಾ ಹಂಚುವನು.