Luke 11:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಹೊರಟುಹೋಗಿ ತನಗಿಂತಲೂ ಹೆಚ್ಚು ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಬಳಿಕ ಆ ದೆವ್ವಗಳೆಲ್ಲಾ ಆ ಮನುಷ್ಯನೊಳಗೆ ಹೋಗಿ ಅಲ್ಲೇ ವಾಸಿಸುತ್ತವೆ. ಆಗ ಆ ವ್ಯಕ್ತಿಯು ಮೊದಲಿಗಿಂತಲೂ ಹೆಚ್ಚಿನ ಸಂಕಟಕ್ಕೆ ಒಳಗಾಗುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು.
Kannada BSI Bible 2016
ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರಕೊಂಡು ಬರುವದು; ಅವು ಒಳಹೊಕ್ಕು ಅಲ್ಲಿ ವಾಸಮಾಡುವವು; ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು ಅಂದನು.
Kannada Bible (KNCL) BSI 2016
ಪುನಃ ಹೊರಟು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳ ಹೊಕ್ಕು ನೆಲಸುತ್ತವೆ. ಕೊನೆಗೆ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗೆ ಇಳಿಯುತ್ತದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಅಶುದ್ಧಾತ್ಮವು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುತ್ತವೆ. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು,” ಎಂದರು.