Luke 11:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಈ ಸಂಗತಿಗಳನ್ನು ಹೇಳಿದಾಗ, ಅಲ್ಲಿ, ಜನರೊಂದಿಗಿದ್ದ ಒಬ್ಬ ಸ್ತ್ರೀ ಯೇಸುವಿಗೆ, “ನಿನ್ನನ್ನು ಹೆತ್ತು ಪೋಷಿಸಿದ ತಾಯಿ ಭಾಗ್ಯವಂತಳೇ ಸರಿ!” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು.
Kannada BSI Bible 2016
ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು - ನಿನ್ನನ್ನು ಹೊತ್ತ ಗರ್ಭವೂ
Kannada Bible (KNCL) BSI 2016
ಯೇಸುಸ್ವಾಮಿ ಹೀಗೆ ಮಾತನಾಡುತ್ತಿದ್ದಾಗ ಜನಸಮೂಹದಿಂದ ಮಹಿಳೆಯೊಬ್ಬಳು, “ನಿಮ್ಮನ್ನು ಉದರದಲ್ಲಿ ಹೊತ್ತು, ನಿಮಗೆ ಮೊಲೆಯೂಡಿಸಿದ ತಾಯಿ ಭಾಗ್ಯವಂತಳು!” ಎಂದು ಕೂಗಿ ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನೆತ್ತಿ ಅವರಿಗೆ, “ನಿಮ್ಮನ್ನು ಗರ್ಭದಲ್ಲಿ ಹೊತ್ತು, ನಿಮಗೆ ಹಾಲುಣಿಸಿದ ತಾಯಿ ಧನ್ಯಳು,” ಎಂದು ಹೇಳಿದಳು.