Luke 11:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರ ಗುಂಪು ದೊಡ್ಡದಾಗುತ್ತಿರಲು ಯೇಸು ಅವರಿಗೆ, “ಈ ಸಂತತಿಯು ಕೆಟ್ಟ ಸಂತತಿಯೇ ಸರಿ! ಇದು ಸೂಚಕಕಾರ್ಯವನ್ನು ನೋಡಬೇಕೆನ್ನುತ್ತದೆ. ಆದರೆ ಯೋನನ ಜೀವಿತದಲ್ಲಾದ ಸೂಚಕಕಾರ್ಯದ ಹೊರತು ಬೇರೆ ಯಾವುದೂ ಇದಕ್ಕೆ ದೊರೆಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ.
Kannada BSI Bible 2016
ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಗುಂಪುಗುಂಪಾಗಿ ಕೂಡಿಬರುತ್ತಿರುವಾಗ ಆತನು ಹೇಳುವದಕ್ಕೆ ತೊಡಗಿದ್ದೇನಂದರೆ - ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ.
Kannada Bible (KNCL) BSI 2016
ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: “ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಗುಂಪುಗುಂಪಾಗಿ ಕೂಡಿಬಂದಿದ್ದಾಗ, ಯೇಸು, “ಇದು ದುಷ್ಟ ಸಂತತಿಯು. ಇದು ಸೂಚಕಕಾರ್ಯವನ್ನು ಹುಡುಕುತ್ತದೆ, ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ದೊರಕದು.