Luke 11:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನ್ಯಾಯತೀರ್ಪಿನ ದಿನದಲ್ಲಿ ದಕ್ಷಿಣ ದೇಶದ ರಾಣಿಯು ಈ ಪೀಳಿಗೆಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು. ಏಕೆಂದರೆ ಆ ರಾಣಿಯು ಬಹುದೂರದಿಂದ ಸೊಲೊಮೋನನ ಜ್ಞಾನಬೋಧನೆಯನ್ನು ಕೇಳಲು ಬಂದಳು. ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಾನು ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.
Kannada BSI Bible 2016
ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ.
Kannada Bible (KNCL) BSI 2016
“ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.