Luke 11:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೀಪವನ್ನು ಹಚ್ಚಿ ಪಾತ್ರೆಯೊಳಗಾಗಲಿ ಬೇರೆ ಎಲ್ಲೇ ಆಗಲಿ ಅಡಗಿಸಿಡುವುದಿಲ್ಲ. ಒಳಗೆ ಬರುವವರಿಗೆ ಬೆಳಕು ಕಾಣಿಸಲೆಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
Kannada BSI Bible 2016
ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
Kannada Bible (KNCL) BSI 2016
“ಯಾರೂ ದೀಪವನ್ನು ಹಚ್ಚಿ ನೆಲಮಾಳಿಗೆಯಲ್ಲಾಗಲಿ, ಬಟ್ಟಲ ಕೆಳಗಾಗಲಿ ಇಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲಿಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾರೂ ದೀಪವನ್ನು ಹಚ್ಚಿ ಮರೆಯಾದ ಸ್ಥಳದಲ್ಲಾಗಲಿ ಬಟ್ಟಲ ಕೆಳಗಾಗಲಿ ಇಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ, ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.