Luke 11:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಕಣ್ಣು ದೇಹಕ್ಕೆ ಬೆಳಕಾಗಿದೆ, ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣ ಬೆಳಕಾಗಿರುವುದು. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಪೂರ್ಣಕತ್ತಲಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು.
Kannada BSI Bible 2016
ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ; ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವದು. ಆದದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.
Kannada Bible (KNCL) BSI 2016
“ನಿನ್ನ ಕಣ್ಣೇ ದೇಹಕ್ಕೆ ದೀಪ; ನಿನ್ನ ಕಣ್ಣು ಸರಿಯಿದ್ದರೆ ನಿನ್ನ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ, ದೇಹವೆಲ್ಲಾ ಕತ್ತಲೆಮಯವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ. ಆದ್ದರಿಂದ ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು. ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವು ಸಹ ಕತ್ತಲೆಯಾಗಿರುವುದು.