Luke 11:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ದೇಹವೆಲ್ಲಾ ಬೆಳಕಿನಿಂದ ತುಂಬಿದ್ದು ಯಾವ ಭಾಗದಲ್ಲಿಯೂ ಕತ್ತಲಿಲ್ಲದಿದ್ದರೆ ನೀನು ಪ್ರಜ್ವಲಿಸುವ ಬೆಳಕಿನಂತಿರುವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು.
Kannada BSI Bible 2016
ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ಭಾಗದಲ್ಲಿಯೂ ಕತ್ತಲಿಲ್ಲದ್ದಾಗಿದ್ದರೆ ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಕಾಲದಲ್ಲಿ ಹೇಗೋ ಹಾಗೆಯೇ ಅದು ಪೂರ್ಣವಾಗಿ ಬೆಳಕಾಗಿರುವದು ಅಂದನು.
Kannada Bible (KNCL) BSI 2016
ದೇಹದ ಯಾವುದೊಂದು ಭಾಗದಲ್ಲೂ ಕತ್ತಲೆಯಿಲ್ಲದೆ ದೇಹವೆಲ್ಲ ಕಾಂತಿಮಯವಾಗಿದ್ದರೆ, ದೀಪವು ತನ್ನ ಪ್ರಕಾಶದಿಂದ ನಿನ್ನನ್ನು ಬೆಳಗಿಸುವಂತೆ, ನಿನ್ನ ದೇಹದಾದ್ಯಂತವೂ ದೇದೀಪ್ಯಮಾನವಾಗಿರುವುದು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಹದ ಯಾವುದೊಂದು ಭಾಗದಲ್ಲಿಯೂ ಕತ್ತಲೆಯಾಗಿರದೆ, ನಿನ್ನ ದೇಹವೆಲ್ಲವೂ ಪೂರ್ಣವಾಗಿ ಬೆಳಕಾಗಿರುವುದಾದರೆ, ಪ್ರಕಾಶಮಾನವಾದ ದೀಪವು ನಿನಗೆ ಬೆಳಕುಕೊಡುವಂತೆ ಸಮಸ್ತವೂ ಬೆಳಕಾಗಿರುವುದು,” ಎಂದು ಹೇಳಿದರು.