Luke 11:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮಾತಾಡಿ ಮುಗಿಸಿದ ಮೇಲೆ ಫರಿಸಾಯನೊಬ್ಬನು ಯೇಸುವನ್ನು ತನ್ನ ಮನೆಗೆ ಊಟಕ್ಕೆ ಬರಬೇಕೆಂದು ಕರೆದನು. ಆದ್ದರಿಂದ ಯೇಸು ಅವನ ಮನೆಯೊಳಗೆ ಹೋಗಿ ಊಟಕ್ಕೆ ಕುಳಿತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು.
Kannada BSI Bible 2016
ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಮಾತಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕೂತುಕೊಂಡನು.
Kannada Bible (KNCL) BSI 2016
ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಗಿಸಿದಾಗ, ಫರಿಸಾಯನೊಬ್ಬನು ಅವರನ್ನು ಊಟಕ್ಕೆ ಆಮಂತ್ರಿಸಿದನು. ಯೇಸು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮಾತನಾಡುವುದನ್ನು ಮುಗಿಸಿದಾಗ, ಒಬ್ಬ ಫರಿಸಾಯನು ತನ್ನೊಂದಿಗೆ ಊಟ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡನು, ಆಗ ಅವರು ಒಳಗೆ ಹೋಗಿ ಊಟಕ್ಕೆ ಕೂತುಕೊಂಡರು.