Luke 11:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.
Kannada BSI Bible 2016
ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ ಫರಿಸಾಯರೇ, ನೀವು ಮರುಗ ಸದಾಪು ಮುಂತಾದ ಸಕಲ ಪಲ್ಯಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ; ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಒತ್ತಟ್ಟಿಗೆ ಬಿಟ್ಟಿದ್ದೀರಿ; ಇವುಗಳನ್ನು ಮಾಡಬೇಕಾಗಿತ್ತು, ಅವುಗಳನ್ನೂ ಬಿಡಬಾರದು.
Kannada Bible (KNCL) BSI 2016
“ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು.