Luke 11:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಯೇಸು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ಜನರು ಅನುಸರಿಸಲಾಗದ ನಿಯಮಗಳನ್ನು ನೀವು ಮಾಡುತ್ತೀರಿ. ಆ ನಿಯಮಗಳಿಗೆ ವಿಧೇಯರಾಗುವಂತೆ ಬೇರೆಯವರಿಗೆ ಬಲವಂತ ಮಾಡುತ್ತೀರಿ. ಆದರೆ ಆ ನಿಯಮಗಳಲ್ಲಿ ಒಂದನ್ನಾದರೂ ಪಾಲಿಸಲು ನೀವು ಪ್ರಯತ್ನಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.
Kannada BSI Bible 2016
ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ; ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವದಿಲ್ಲ.
Kannada Bible (KNCL) BSI 2016
ಅದಕ್ಕೆ ಯೇಸು, “ಶಾಸ್ತ್ರಜ್ಞರೇ, ನಿಮಗೂ ಧಿಕ್ಕಾರ! ಹೊರಲಾಗದ ಹೊರೆಗಳನ್ನು ನೀವು ಜನರ ಮೇಲೆ ಹೇರುತ್ತೀರಿ; ನೀವಾದರೋ ನಿಮ್ಮ ಕಿರುಬೆರಳಿನಿಂದ ಕೂಡ ಅವುಗಳನ್ನು ಮುಟ್ಟುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು, “ನಿಯಮ ಪಂಡಿತರೇ, ನಿಮಗೂ ಕಷ್ಟ, ಏಕೆಂದರೆ ಹೊರಲಾಗದ ಹೊರೆಗಳನ್ನು ಮನುಷ್ಯರ ಮೇಲೆ ಹೊರಿಸುತ್ತೀರಿ, ನೀವಾದರೋ ಈ ಹೊರೆಗಳನ್ನು ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ಮುಟ್ಟುವುದಿಲ್ಲ.