Luke 11:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದರಿಂದಾಗಿ, ನಿಮ್ಮ ಪಿತೃಗಳು ಮಾಡಿದ ಕೃತ್ಯಗಳನ್ನು ನೀವು ಒಪ್ಪಿಕೊಂಡಿದ್ದೀರೆಂಬುದನ್ನು ಎಲ್ಲಾ ಜನರಿಗೆ ತೋರಿಸುತ್ತೀರಿ. ಅವರು ಪ್ರವಾದಿಗಳನ್ನು ಕೊಂದರು. ನೀವು ಆ ಪ್ರವಾದಿಗಳಿಗಾಗಿ ಗೋರಿಗಳನ್ನು ಕಟ್ಟುತ್ತೀರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.
Kannada BSI Bible 2016
ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ನಿಮ್ಮ ಪಿತೃಗಳು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವದಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನೇ ಕಟ್ಟುತ್ತೀರಿ.
Kannada Bible (KNCL) BSI 2016
ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಅನುಮೋದಿಸುತ್ತೀರಿ ಎಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಪ್ರವಾದಿಗಳನ್ನು ಕೊಂದವರು ಅವರಾದರೆ, ಗೋರಿ ನಿರ್ಮಿಸುತ್ತಿರುವವರು ನೀವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರಿಂದ ನಿಜವಾಗಿಯೂ ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಒಪ್ಪಿಕೊಳ್ಳುವಂತೆ ಸಾಕ್ಷಿಕರಿಸುತ್ತೀರಿ; ಏಕೆಂದರೆ ಅವರು ನಿಜವಾಗಿಯೂ ಪ್ರವಾದಿಗಳನ್ನು ಕೊಂದರು, ನೀವೋ ಅವರ ಸಮಾಧಿಗಳನ್ನು ಕಟ್ಟುತ್ತೀರಿ.