Luke 11:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ದೇವರ ಕುರಿತಾಗಿ ಕಲಿಯಲು ಸಾಧನವಾಗಿರುವ ಬೀಗದ ಕೈಯನ್ನು ನೀವು ಬಚ್ಚಿಟ್ಟಿದ್ದೀರಿ. ನೀವೂ ಕಲಿಯುವುದಿಲ್ಲ, ಬೇರೆಯವರಿಗೂ ಕಲಿಯಲು ಬಿಡುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು.
Kannada BSI Bible 2016
ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ ಧರ್ಮೋಪದೇಶಕರೇ, ಜ್ಞಾನಕ್ಕೆ ಸಾಧನವಾದ ಬೀಗದ ಕೈಯನ್ನು ತೆಗೆದುಬಿಟ್ಟಿರಿ. ನೀವೂ ಒಳಕ್ಕೆ ಹೋಗಲಿಲ್ಲ; ಒಳಕ್ಕೆ ಹೋಗುತ್ತಿರುವವರಿಗೂ ಅಡ್ಡಿಮಾಡಿದಿರಿ ಅಂದನು.
Kannada Bible (KNCL) BSI 2016
ಧರ್ಮಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಯಮ ಪಂಡಿತರೇ, ನಿಮಗೆ ಕಷ್ಟ, ಏಕೆಂದರೆ ನೀವು ಜ್ಞಾನದ ಬೀಗದ ಕೈಯನ್ನು ತೆಗೆದುಕೊಂಡಿದ್ದೀರಿ. ನೀವಂತೂ ಒಳಗೆ ಪ್ರವೇಶಿಸಲಿಲ್ಲ; ಒಳಗೆ ಪ್ರವೇಶಿಸುತ್ತಿರುವವರಿಗೂ ನೀವು ತಡೆಗಟ್ಟುತ್ತೀರಿ,” ಎಂದು ಹೇಳಿದರು.