Luke 11:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅಲ್ಲಿಂದ ಹೊರಟಾಗ ಧರ್ಮೋಪದೇಶಕರು ಮತ್ತು ಫರಿಸಾಯರು ಆತನಿಗೆ ಮತ್ತಷ್ಟು ತೊಂದರೆ ಕೊಡಲು ಪ್ರಾರಂಭಿಸಿದರು. ಅವರು ಅನೇಕ ಸಂಗತಿಗಳ ಕುರಿತು ಪ್ರಶ್ನೆಗಳನ್ನು ಕೇಳಿ, ಆತನಿಂದ ಉತ್ತರ ಹೇಳಿಸುವುದಕ್ಕೆ ಪ್ರಯತ್ನಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,
Kannada BSI Bible 2016
ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಆತನು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿನವಾಗಿ ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡಿ ಪ್ರಶ್ನೆ ಮಾಡುತ್ತಾ
Kannada Bible (KNCL) BSI 2016
ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಅವರನ್ನು ಉಗ್ರವಾಗಿ ಪ್ರತಿಭಟಿಸಲಾರಂಭಿಸಿದರು. ಹಲವಾರು ವಿಷಯಗಳನ್ನು ಕುರಿತು ಮಾತಾಡುವಂತೆ ಕೆಣಕಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ, ನಿಯಮ ಬೋಧಕರೂ ಫರಿಸಾಯರೂ ಕೋಪಾವೇಶವುಳ್ಳವರಾಗಿ, ಯೇಸು ಇನ್ನೂ ಹೆಚ್ಚು ವಿಷಯಗಳನ್ನು ಮಾತನಾಡುವಂತೆ ಅವರನ್ನು ಕೆಣಕಿದರು,