Luke 11:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನೆಯೊಳಗಿರುವ ಸ್ನೇಹಿತನು, ‘ಹೊರಟುಹೋಗು! ನನಗೆ ತೊಂದರೆ ಕೊಡಬೇಡ! ಬಾಗಿಲು ಮುಚ್ಚಿದೆ! ನಾನು ಮತ್ತು ನನ್ನ ಮಕ್ಕಳು ಮಲಗಿದ್ದೇವೆ. ಈಗ ಎದ್ದು ನಿನಗೆ ರೊಟ್ಟಿ ಕೊಡಲಾರೆ’ ಎಂದು ಉತ್ತರಕೊಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’
Kannada BSI Bible 2016
ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ನೇಹಿತನು - ನನಗೆ ತೊಂದರೆಕೊಡಬೇಡ; ಈಗ ಕದಾಹಾಕಿ ಅದೆ; ನನ್ನ ಚಿಕ್ಕ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ನಿನಗೆ ಕೊಡುವದಕ್ಕಾಗುವದಿಲ್ಲ ಎಂದು ಒಳಗಿನಿಂದ ಉತ್ತರ ಕೊಟ್ಟರೂ ಕೊಡಬಹುದು.
Kannada Bible (KNCL) BSI 2016
ಈ ಸ್ನೇಹಿತ ಒಳಗಿನಿಂದಲೇ, ‘ನನಗೆ ತೊಂದರೆ ಕೊಡಬೇಡ; ಬಾಗಿಲು ಹಾಕಿ ಆಗಿದೆ; ನನ್ನ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ಬಂದು ಕೊಡುವುದಕ್ಕಾಗುವುದಿಲ್ಲ,’ ಎಂದು ಉತ್ತರ ಕೊಡುವುದು ಸಹಜವಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಒಳಗಿನಿಂದಲೇ ಇವನಿಗೆ ಉತ್ತರವಾಗಿ, ‘ನನ್ನನ್ನು ತೊಂದರೆಪಡಿಸಬೇಡ. ಬಾಗಿಲು ಈಗ ಮುಚ್ಚಿದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆ ಮಲಗಿದ್ದಾರೆ. ನಾನೆದ್ದು ಕೊಡಲಾರೆನು,’ ಎಂದು ಹೇಳುವನು.