Luke 11:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೇವಲ ಸ್ನೇಹವೊಂದೇ ಅವನನ್ನು ಏಳಿಸಿ ರೊಟ್ಟಿ ಕೊಡುವಂತೆ ಮಾಡಲಾರದೆಂದು ನಾನು ನಿಮಗೆ ಹೇಳುತ್ತೇನೆ. ಆದರೆ ಅವನು ಎಡಬಿಡದೆ ಕೇಳುತ್ತಲೇ ಇದ್ದರೆ, ಅವನು ಎದ್ದು ತನ್ನ ಸ್ನೇಹಿತನಿಗೆ ಬೇಕಾಗಿರುವ ರೊಟ್ಟಿಯನ್ನು ಖಂಡಿತವಾಗಿ ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.
Kannada BSI Bible 2016
ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸ್ನೇಹದ ನಿವಿುತ್ತವಾಗಿ ಎದ್ದು ಕೊಡದೆ ಇದ್ದರೂ ಅವನ ಕಾಟದ ದೆಸೆಯಿಂದ ಎದ್ದು ಬಂದು ಕೇಳಿದಷ್ಟು ಅವನಿಗೆ ಕೊಡುವನೆಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ಆದರೂ, ತನ್ನ ಗೆಳೆಯ ಇವನು ಎಂದು ಎದ್ದುಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದುಬಂದು ಕೇಳಿದಷ್ಟನ್ನು ಕೊಡುತ್ತಾನೆಂಬುದು ನಿಜ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ನಿಮಗೆ ಹೇಳುವುದೇನೆಂದರೆ, ಅವನು ಸ್ನೇಹಿತನಾಗಿರುವುದರಿಂದ ಎದ್ದು ಇವನಿಗೆ ಕೊಡದೆಹೋದರೂ ಮೇಲಿಂದ ಮೇಲೆ ನಾಚಿಕೆಪಡದೆ ಬೇಡುವುದರಿಂದ ಎದ್ದು ಇವನಿಗೆ ಬೇಕಾದಷ್ಟು ಕೊಡುವನು.